ಮುಂಬೈ, ಆ 01(DaijiworldNews/MS): ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಸ್ವಯಂ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ್ದು, ಇದೀಗ ಅವರಿಗೆ ಶಸ್ತ್ರಾಸ್ತ್ರ ಪರವಾನಗಿಯನ್ನು ನೀಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಮೇ 29 ರಂದು ಪಂಜಾಬ್ನ ಮಾನ್ಸಾ ಬಳಿ ಗಾಯಕ ಸಿಧು ಮೂಸ್ ವಾಲಾ ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ನಂತರ ಜೂನ್ ಆರಂಭದಲ್ಲಿ ನಟ ಮತ್ತು ಅವರ ತಂದೆಗೆ ಕೊಲೆ ಬೆದರಿಕೆ ಬಂದಿತ್ತು.ಈ ಹಿನ್ನೆಲೆಯಲ್ಲಿ ಆತ್ಮ ರಕ್ಷಣೆಗಾಗಿ ಸಲ್ಮಾನ್ ಖಾನ್ ಅವರು ಗನ್ ಪರವಾನಿಗೆಗಾಗಿ ಅರ್ಜಿ ಸಲ್ಲಿಸಿದ್ದರು. ಮಾತ್ರವಲ್ಲದೇ ಇತ್ತೀಚೆಗೆ ಈ ವಗ್ಗೆ ಮುಂಬೈ ಪೊಲೀಸ್ ಆಯುಕ್ತ ವಿವೇಕ್ ಪನ್ಸಾಲ್ಕರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಮಾತ್ರವಲ್ಲದೆ ಪರವಾನಗಿ ಪ್ರಾಧಿಕಾರದ ಮುಂದೆ ಭೌತಿಕ ಪರಿಶೀಲನೆಯೂ , ಬಂದೂಕು ಪರವಾನಗಿಗೆ ಅರ್ಜಿ ಸಲ್ಲಿಸುವಲ್ಲಿ ಕಡ್ಡಾಯ ಹಂತವಾಗಿದೆ ಎಂದು ಮೂಲಗಳು ತಿಳಿಸಿತ್ತು.
ಪಂಜಾಬಿ ಗಾಯಕ ಸಿಧು ಮೂಸೇವಾಲ ಹತ್ಯೆಯ ಬಳಿಕ ಸಲ್ಮಾನ್ ಖಾನ್, ಅವರ ತಂದೆ ಹಾಗೂ ವಕೀಲರಿಗೆ ಜೀವ ಬೆದರಿಕೆ ಒಡ್ಡಲಾಗಿತ್ತು. 1998ರ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿ ಸಲ್ಮಾನ್ ಖಾನ್ಗೆ ಲಾರೆನ್ಸ್ ಬಿಷ್ಣೋಯ್ ಅವರ ಪ್ರಾಣ ಬೆದರಿಕೆ ಹಾಕಲಾಗಿತ್ತು
ಬೆದರಿಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಟ ಸಲ್ಮಾನ್ ಖಾನ್ ಬುಲೆಟ್ ಫ್ರೂಪ್ ಕಾರ್ ಅನ್ನು ತೆಗೆದುಕೊಂಡಿದ್ದು ಅಲ್ಲದೇ ಅವರು ತಮ್ಮ ಬಾಡಿಗಾರ್ಡ್ಗಳ ಸಂಖ್ಯೆಯನ್ನೂ ಹೆಚ್ಚಳ ಮಾಡಿಕೊಂಡಿದ್ದಾರೆ. ಅವರು ಅನಗತ್ಯವಾಗಿ ವಿವಿಧ ಕಾರ್ಯಕ್ರಮಗಳಲ್ಲೂ ಅವರು ಭಾಗಿಯಾಗುತ್ತಿಲ್ಲ ಎಂದು ವರದಿಗಳು ತಿಳಿಸಿವೆ