ತೀರ್ಥಹಳ್ಳಿ, ಆ 01 (DaijiworldNews/HR): ತೀರ್ಥಹಳ್ಳಿಯ ಆಗುಂಬೆ ಸಮೀಪದಲ್ಲಿ ಮೃತದೇಹವನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ತರೀಕೆರೆ ನಿವಾಸಿಯೊಬ್ಬರ ಮೃತದೇಹವನ್ನು ಕರೆತರುತಿದ್ದಾಗ ಆಗುಂಬೆ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿದ್ದು, ಅಪಘಾತದಲ್ಲಿ ಮೃತ ವ್ಯಕ್ತಿಯ ಮಗನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಘಟನೆ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.