ಹೈದರಾಬಾದ್,ಆ 01 (DaijiworldNews/HR): ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ.ರಾಮರಾವ್ ಅವರ ನಾಲ್ಕನೇ ಪುತ್ರಿ ಕೆ ಉಮಾ ಮಹೇಶ್ವರಿ ಇಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜುಬಿಲಿ ಹಿಲ್ಸ್ ನಲ್ಲಿರುವ ತಮ್ಮ ನಿವಾಸದಲ್ಲಿ ನಡೆದಿದೆ.
ಎನ್.ಟಿ. ಆರ್ ಅವರ ಪುತ್ರಿ ಉಮಾ ಮಹೇಶ್ವರಿ ಅವರು ಕೆಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.
ಇನ್ನು ತಾವು ಮಲಗುವ ಕೋಣೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬಳಿಕ ಜುಬಿಲಿ ಹಿಲ್ಸ್ ಪೊಲೀಸರು ಶವವನ್ನು ಶವಪರೀಕ್ಷೆಗಾಗಿ ಸ್ಥಳಾಂತರಿಸಿದ್ದು, ಪ್ರಕರಣ ದಾಖಲಾಗಿದೆ.