ಶಿವಮೊಗ್ಗ, ಆ 01 (DaijiworldNews/HR): ಖಾಸಗಿ ಬಸ್ ಮತ್ತು ಓಮ್ನಿ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪ ನಡೆದಿದೆ.
ಮೃತಪಟ್ಟವರು ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದವರು. ಜೋಗ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಎದುರಿನಿಂದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇನ್ನು ಸಾಗರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.