ಬೆಂಗಳೂರು, ಆ 02 (DaijiworldNews/HR): ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಗುರುವಾರ ರಾಜ್ಯಕ್ಕೆ ಆಗಮಿಸುತ್ತಿದ್ದು, ಹತ್ಯೆಗೀಡಾದ ಬಿಜೆಪಿ ಪ್ರವೀಣ್ ನೆಟ್ಟಾರ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವಾನ ಹೇಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಸ್ಟ್ 4ರಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ಬಗ್ಗೆ ರಾಜ್ಯ ಘಟಕದ ಬಳಿ ಯಾವುದೇ ಮಾಹಿತಿ ಇಲ್ಲ. ಕೇಂದ್ರ ಗೃಹ ಸಚಿವರ ಯಾವುದೇ ಕಾರ್ಯಕ್ರಮ ಸದ್ಯಕ್ಕೆ ಇಲ್ಲ. ಅವರು ಆಗಮಿಸುವ ಮಾಹಿತಿಯೂ ಇಲ್ಲ ಎಂದು ರಾಜ್ಯ ಪದಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇನ್ನು ಅಮಿತ್ ಶಾ ರಾಜ್ಯಕ್ಕೆ ಬರುವ ಕಾರ್ಯಕ್ರಮ ಮುಂಚಿತವಾಗಿಯೇ ನಿಗದಿಯಾಗಿರುತ್ತದೆ. ಆದರೆ ಈ ಬಾರಿ ರಾಜ್ಯ ನಾಯಕರಿಗೆ ಮಾಹಿತಿ ನೀಡದೇ ಹೈಕಮಾಂಡ್ ದಿಢೀರ್ ಆಗಿ ನಿಗದಿ ಪಡಿಸಿದೆ.