ಕೇರಳ, ಆ 02 (DaijiworldNews/HR): ಕೇರಳದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಮುಂದಿನ ಮೂರು ದಿನಗಳ ಕಾಲ 14 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಸಾಂದರ್ಭಿಕ ಚಿತ್ರ
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ಮಂದಿ ಕಂಗಾಲಾಗಿದ್ದು, 757 ಜನರನ್ನು 47 ತಾತ್ಕಾಲಿಕ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
ಇನ್ನು ಈ ಮಧ್ಯೆ ಮೂರು ಕಣ್ಣೂರು, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭೂಕುಸಿತಗಲಾಗಿದ್ದು, ತ್ರಿಶೂರ್ ನ ಚಾವಕ್ಕಾಡ್ ನಲ್ಲಿ ಇಬ್ಬರು ಮೀನುಗಾರರು ಕಾಣೆಯಾಗಿದ್ದಾರೆ.
ಪ್ರವಾಸಿ ತಾಣಗಳನ್ನು ಮುಚ್ಚಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.