ಬೆಂಗಳೂರು, ಆ 04 (DaijiworldNews/DB): ಮುಂದಿನ ವಿಧಾನಸಭಾ ಚುನಾವಣೆಗೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ತ್ರದಿಂದ ಸ್ಪರ್ಧಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಿಸಾನ್ ಕಾಂಗ್ರೆಸ್ ಒತ್ತಾಯಿಸಿದೆ.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧ ಸ್ಪರ್ಧೆಗಿಳಿಯುವಂತೆ ಒತ್ತಾಯಿಸಲಾಗಿದೆ ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು ಇಂಧಿರಾ ಗಾಂಧಿಯವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರವಾಗಿದೆ. ಇಲ್ಲಿ ಬಿಜೆಪಿಯನ್ನು ಧೂಳೀಪಟ ಮಾಡುವುದು ಅಗತ್ಯವಾಗಿದೆ. ಹೀಗಾಗಿ ಚಿಕ್ಕಮಗಳೂರಿನಲ್ಲಿ ಸ್ಪರ್ಧಿಸಬೇಕೆಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಸಿದ್ದರಾಮಯ್ಯರನ್ನು ಒತ್ತಾಯಿಸಿದೆ.