ಮುಂಬೈ, ಆ 04 (DaijiworldNews/DB): ಪಟ್ರಾ ಚಾವ್ಲ್ ಭೂ ಪುನರ್ ಅಭಿವೃದ್ಧಿ ಪ್ರಕರಣ ಮತ್ತು ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿರುವ ಶಿವಸೇನಾ ಹಿರಿಯ ಮುಖಂಡ ಸಂಜಯ್ ರಾವತ್ ಅವರ ಇಡಿ ಕಸ್ಟಡಿಯನ್ನು ಆಗಸ್ಟ್ 8ರವರೆಗೆ ವಿಸ್ತರಣೆ ಮಾಡಲಾಗಿದೆ.
ರಾವತ್ ಬಂಧನ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಅವರನ್ನು ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಅವರ ಇಡಿ ಕಸ್ಟಡಿಯನ್ನು ವಿಸ್ತರಿಸಿ ಆದೇಶಿಸಿದೆ.
ಪಟ್ರಾ ಚಾವ್ಲ್ ಭೂ ಪುನರ್ ಅಭಿವೃದ್ಧಿ ಪ್ರಕರಣ ಮತ್ತು ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿ ಭಾನುವಾರ ಮಧ್ಯರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾವತ್ ಅವರನ್ನು ಬಂಧಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಎಂಟು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸುವಂತೆ ಕೋರಿತ್ತು. ಆದರೆ ಎಂಟು ದಿನಗಳ ಬದಲಾಗಿ ರಾವತ್ ಅವರನ್ನು ಆಗಸ್ಟ್ 4ರವರೆಗೆ ರಾವತ್ ಅವರನ್ನು ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿ ನ್ಯಾಯಾಧೀಶರಾದ ಎಂಜಿ ದೇಶಪಾಂಡೆ ಆದೇಶಿಸಿದ್ದರು. ಅದರಂತೆ ಇಂದಿಗೆ ಅವರ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಇದೀಗ ಮತ್ತು ಆಗಸ್ಟ್ 8ರವರೆಗೆ ಕಸ್ಟಡಿ ವಿಸ್ತರಣೆ ಮಾಡಲಾಗಿದೆ.