ನವದೆಹಲಿ, ಆ 05 (DaijiworldNews/HR): ಪ್ರತಿಪಕ್ಷ ನಾಯಕರಿಗೆ ಕಿರುಕುಳ ನೀಡಲು ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸುತ್ತಿದ್ದು, ದೇಶದಲ್ಲಿ ಸರ್ವಾಧಿಕಾರದ ಆರಂಭವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದೆ.
ಈ ಕುರಿತು ಮಾತನಾಡಿರುವ ಅವರು, ನಾವು ಏಳು ದಶಕಗಳಲ್ಲಿ ಏನನ್ನು ಸೃಷ್ಟಿಸಿದ್ದೇವೋ ಅದು ಕೇವಲ ಐದು ವರ್ಷಗಳಲ್ಲಿ ನಾಶವಾಗಿದೆ. ನಾವು ಭಾರತೀಯ ಪ್ರಜಾಪ್ರಭುತ್ವವನ್ನು ಚಿಂತಾಜನಕ ಸ್ಥಿತಿಯಲ್ಲಿ ನೋಡುತ್ತಿದ್ದು, ಈ ಸರ್ಕಾರದ ಏಕೈಕ ಅಜೆಂಡಾ ಜನರ ಸಮಸ್ಯೆಗಳನ್ನು ನಿರ್ಲಕ್ಷಿಸುವುದಾಗಿದೆ ಎಂದರು.
ಪ್ರತಿಪಕ್ಷ ನಾಯಕರ ವಿರುದ್ಧ ತನಿಖಾ ಸಂಸ್ಥೆಗಳನ್ನು ನರೇಂದ್ರ ಮೋದಿ ಬಳಸಿಕೊಳ್ಳುತ್ತಿರುವ ರೀತಿ ಭಾರತವು ಸರ್ವಾಧಿಕಾರದ ಆರಂಭವನ್ನು ತೋರಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದಾರೆ.
ಇನ್ನು ಏರುತ್ತಿರುವ ಬೆಲೆಗಳು, ನಿರುದ್ಯೋಗ, ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ದರ ಏರಿಕೆ ವಿರುದ್ಧ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿದ್ದು, ಪಕ್ಷದ ನಾಯಕರು ದೆಹಲಿಯ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ನಡೆಸಲು ಯೋಜಿಸಿದ್ದು, ಕಾಂಗ್ರೆಸ್ನ ರಾಜ್ಯ ಘಟಕಗಳು ದೇಶಾದ್ಯಂತ ಇದೇ ರೀತಿಯ ಪ್ರತಿಭಟನೆಗಳನ್ನು ನಡೆಸಲಿವೆ ಎಂದು ಹೇಳಿದ್ದಾರೆ.