ಯಾದಗಿರಿ, ಆ 05 (DaijiworldNews/HR): ಗುರುಮಠಕಲ್ ತಾಲ್ಲೂಕಿನ ಅರಕೇರಾ ಬಳಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಹೆಣ್ಣುಮಗು ಸೇರಿ 6 ಜನ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಮಹ್ಮದ್ ವಾಜೀದ್ ಹುಸೇನ್(40), ಮಹ್ಮದ್ ನಜರ್ ಹುಸೇನ್ (76), ನೂರ್ ಜಹಾನ್ ಬೇಗಂ (70), ಹೀನಾ ಬೇಗಂ (30), ಇಮ್ರಾನ್ (22), ಉಮೇಜಾ (5 ತಿಂಗಳು) ಎಂದು ಗುರುತಿಸಲಾಗಿದೆ.
ಇನ್ನು ಬಾಲಕ ಮಹ್ಮದ್ ಫಾಜೀಲ್ ಹುಸೇನ್ ಗಾಯಗೊಂಡಿದ್ದು,ಬಾಲಕನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ ಧಾರ್ಮಿಕ ಕಾರ್ಯಕ್ರಮ ಮುಗಿಸಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಅರಕೇರಾ ಬಳಿ ದುರ್ಘಟನೆ ನಡೆದಿದ್ದು, ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆ ಕುರಿತು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.