ರಾಜಸ್ಥಾನ, ಆ 05 (DaijiworldNews/HR): ರಾಜಸ್ಥಾನದ ಭರತ್ಪುರದಲ್ಲಿ ಯುವತಿಯೊಬ್ಬಳು ಅನ್ಯ ಧರ್ಮೀಯ ಯುವಕನನ್ನು ಮದುವೆಯಾಗಿರುವುದಕ್ಕೆ ಆಕೆಯ ತಂದೆ ತನ್ನ ಮಗಳಿಗೆ ಆಟೋ ಡಿಕ್ಕಿ ಹೊಡೆಸಿ ಹತ್ಯೆ ಮಾಡಲು ಮುಂದಾದ ಘಟನೆ ನಡೆದಿದ್ದು, ಇದರ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಯುವತಿ ತನ್ನ ಪತಿಯೊಂದಿಗೆ ನಡೆದು ಹೋಗುತ್ತಿದ್ದ ವೇಳೆ ಆಟೋದಲ್ಲಿ ಹಿಂಬಾಲಿಸಿಕೊಂಡು ಬಂದ ಆಕೆಯ ತಂದೆ ಡಿಕ್ಕಿ ಹೊಡೆಸಲು ಯತ್ನಿಸಿದ್ದು, ಇದರಿಂದ ಗಾಬರಿಗೊಂಡ ಅವರಿಬ್ಬರೂ ದಿಕ್ಕಾಪಾಲಾಗಿ ಓಡಿದ್ದಾರೆ.
ಇನ್ನು ಈ ಹಿಂದೆ ಮದುವೆಯ ಸಂದರ್ಭದಲ್ಲಿಯೂ ಹಲ್ಲೆ ನಡೆಸಲು ಯತ್ನಿಸಿದ್ದ ಎನ್ನಲಾಗಿದ್ದು, ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿ ಬಳಿಕ ದಂಪತಿ ರಕ್ಷಣೆ ಕೋರಿದ್ದರು. ಇದೀಗ ಮತ್ತೆ ಹತ್ಯೆ ಮಾಡಲು ಮುಂದಾಗಿದ್ದಾನೆ.