ನವದೆಹಲಿ, ಆ 05 (DaijiworldNews/HR): ಕಾಂಗ್ರೆಸ್ ಕಾರ್ಯಕರ್ತರು ಬೆಲೆ ಏರಿಕೆ, ನಿರುದ್ಯೋಗ ಮತ್ತು ಜಿಎಸ್ಟಿ ಏರಿಕೆ ವಿರೋಧಿಸಿ ರಾಷ್ಟ್ರವ್ಯಾಪಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿ ಹೊರ ಭಾಗದಲ್ಲಿ ಪ್ರತಿಭಟನೆ ನಡೆಸುವ ವೇಳೆ ರಾಹುಲ್ ಗಾಂಧಿ ಹಾಗೂ ಶಶಿ ತರೂರ್ ಸೇರಿದಂತೆ ಅನೇಕ ಕಾಂಗ್ರೆಸ್ ಸಂಸದರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಇನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಇಂದು ಸಂಸತ್ತಿನಲ್ಲಿ ಕಪ್ಪು ಬಟ್ಟೆ ಧರಿಸಿ ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸಿ, ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದೆ.