ನವದೆಹಲಿ, ಆ 05 (DaijiworldNews/SM): ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದು ಅಯೋಧ್ಯೆಯಲ್ಲಿ ರಾಮ ಮಂದಿರ ಶಂಕುಸ್ಥಾಪನಾ ಸಮಾರಂಭದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಆಗಸ್ಟ್ 05 2020 ರಂದು ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ರು. ಆಗಸ್ಟ್ 05ರಂದೇ ಕಾಂಗ್ರೆಸ್ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದ್ದನ್ನ ಅಮಿತ್ ಶಾ ಈ ರೀತಿ ಟೀಕಿಸಿದ್ದಾರೆ.
ನ್ಯಾಯಾಲಯದಲ್ಲಿ ಪ್ರಕರಣಗಳು ದಾಖಲಾಗಿವೆ. ಆದರೆ ಅವರು ಪ್ರತಿದಿನ ಏಕೆ ಪ್ರತಿಭಟನೆಗಳನ್ನು ಮಾಡುತ್ತಾರೆ? ಕಾಂಗ್ರೆಸ್ಗೆ ಹಿಡನ್ ಅಜೆಂಡಾವಿದೆ ಎಂದು ನಾನು ಭಾವಿಸುತ್ತೇನೆ. ಅವರು ತಮ್ಮ ಓಲೈಕೆ ನೀತಿಯನ್ನು ಮರೆಮಾಚುವ ರೀತಿಯಲ್ಲಿ ವಿಸ್ತರಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.