ಬೆಂಗಳೂರು, ಆ 06 (DaijiworldNews/HR): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ದೆಹಲಿ ಪ್ರವಾಸ ರದ್ದಾಗಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದಿದ್ದಾರೆ.
ಇನ್ನು ನಾನು ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇಂದು ಬೊಮ್ಮಾಯಿ ಅವರು ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ನೀತಿ ಆಯೋಗದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದರು. ಆದರೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದಾಗಿದೆ.