ಬೆಂಗಳೂರು, ಆ 06 (DaijiworldNews/MS): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಗಳನ್ನು ನಿಷೇಧಿಸುವ ಕುರಿತು ಈಗಾಗಲೇ ರಾಜ್ಯ ಸರ್ಕಾರವು ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು , ಇವುಗಳನ್ನು ನಿಷೇಧಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಾಸಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ಬಗ್ಗೆ ನಗರದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಎಸ್ಡಿಪಿಐ ಹಾಗೂ ಪಿಎಫ್ಐ ಕೇಂದ್ರ ಸರ್ಕಾರ ಯಾವುದೇ ಹಂತದಲ್ಲಾದರೂ ನಿಷೇಧಿಸುವ ವಿಶ್ವಾಸವಿದೆ ಈ ಬಗ್ಗೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಜನ್ಮದಿನದ ಅಮೃತಮಹೋತ್ಸವದಿಂದ ಬಿಜೆಪಿಗೆ ಯಾವುದೇ ಪರಿಣಾಮ ಬೀರಿಲ್ಲ . ಮೊನ್ನೆ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಸೂಚನೆಯಂತೆ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು. ಅದು ತೋರಿಕೆಯ ಒಗ್ಗಟ್ಟು ಅಷ್ಟೇ. ಅವರ ಆತಂರಿಕ ಕಲಹ ಜನ್ಮ ದಿನಾಚರಣೆ ಜೋರಾಗಿದೆ ಎಂದು ಟೀಕಿಸಿದರು.