ಮುಂಬೈ, ಆ 06 (DaijiworldNews/HR): ಶಿವಸೇನಾ ನಾಯಕ ಸಂಜಯ್ ರಾವುತ್ ಅವರ ಪತ್ನಿ, ವರ್ಷಾ ರಾವುತ್ ಅವರು ಪತ್ರ ಚಾಲ್ ಭೂಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯ (ಇಡಿ) ಕಚೇರಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಬ್ಯಾಂಕ್ ಖಾತೆಗಳಿಂದ ಹಣದ ವಹಿವಾಟು ನಡೆದಿರುವ ಬಗ್ಗೆ ಮಾಹಿತಿ ಪತ್ತೆಯಾದ ಹಿನ್ನೆಲೆಯಲ್ಲಿ ವರ್ಷಾ ರಾವುತ್ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್ ನೀಡಿತ್ತು.
ಇನ್ನು ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎಂಬ ಆರೋಪವಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಗಾಗಿರುವ ಸಂಜಯ್ ರಾವುತ್ ಅವರನ್ನು ಆಗಸ್ಟ್ 8ರ ವರೆಗೆ ಇ.ಡಿ ಕಸ್ಟಡಿಗೆ ಒಪ್ಪಿಸಲಾಗಿದೆ.