ಬಿಹಾರ, ಆ 06 (DaijiworldNews/DB): ಬೋಟ್ನಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡು ನಾಲ್ವರು ಸಾವನ್ನಪ್ಪಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.
ಪಾಟ್ನಾದ ಮನೇರ್ ಗಂಗಾ ಘಾಟ್ನಲ್ಲಿ 20ಕ್ಕೂ ಹೆಚ್ಚು ಮಂದಿ ಬೋಟ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅದರಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಪೋಟದ ಪರಿಣಾಮ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದರೆ, ಹಲವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.