ಧಾರವಾಡ, ಆ 07 (DaijiworldNews/DB): ದರ್ಗಾವೊಂದಕ್ಕೆ ಕಾರು ಢಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೊಳದ ಬಳಿ ತಡರಾತ್ರಿ ನಡೆದಿದೆ.
ಮೃತರನ್ನು ಎಇಇ ರವೀಂದ್ರ ನಾಗನಾಥ, ಹನುಮಂತಪ್ಪ ಬೇವಿನಕಟ್ಟೆ, ರೇಣುಕಾ ಬೇವಿನಕಟ್ಟೆ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯ ಗೃಹಪ್ರವೇಶ ಮುಗಿಸಿ ಹುಬ್ಬಳ್ಳಿಯ ನವನಗರಕ್ಕೆ ಹಿಂತಿರುಗುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕುಂದಗೊಳದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಜಿಗಳೂರು ಬಳಿಯಿರುವ ದರ್ಗಾವೊಂದಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಅಸುನೀಗಿದ್ದಾರೆ.
ಸ್ಥಳಕ್ಕೆ ಕುಂದಗೋಳ ಠಾಣೆ ಇನ್ಸ್ ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.