ಮಥುರ, ಆ 07 (DaijiworldNews/DB): ಉದ್ಯೋಗಕ್ಕೆಂದು ಅರ್ಜಿ ಭರ್ತಿ ಮಾಡಲು ಸಾರ್ವಜನಿಕ ಸೇವಾ ಕೇಂದ್ರಕ್ಕೆ ಹೋಗಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಮಹಿಳೆಯೊಬ್ಬಳು ಮೇ 28ರಂದು ಅಂಗನವಾಡಿ ಕಾರ್ಯಕರ್ತೆ ಉದ್ಯೋಗಕ್ಕೆಂದು ಅರ್ಜಿ ಹಾಕಲು ಅರ್ಜಿ ಭರ್ತಿ ಮಾಡಲು ಸಾರ್ವಜನಿಕ ಸೇವಾ ಕೇಂದ್ರಕ್ಕೆ ತೆರಳಿದ್ದಳು. ಈ ವೇಳೆ ಕೇಂದ್ರ ನಿರ್ವಾಹಕ, ಕಂಪ್ಯೂಟರ್ ನಿರ್ವಾಹಕ, ಅಂಗಡಿ ಮಾಲಿಕ ಹಾಗೂ ಮತ್ತೊಬ್ಬ ವ್ಯಕ್ತಿ ಸೇರಿ ನಾಲ್ವರು ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ, ಘಟನೆಯ ವೀಡಿಯೋ ಚಿತ್ರೀಕರಣ ಮಾಡಿ ಆಕೆಯ ಸಂಬಂಧಿಕರಿಗೆ ಕಳುಹಿಸಿದ್ದಾರೆ. ಹೀಗಾಗಿ ಘಟನೆ ಬೆಳಕಿಗೆ ಬಂದಿದೆ.
ಆರೋಪಿಗಳು ಮತ್ತು ಸಂತ್ರಸ್ತ ಮಹಿಳೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯವರಾಗಿದ್ದು, ಒಟ್ಟಿಗೇ ಶಿಕ್ಷಣ ಪಡೆದವರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ಶ್ರೀಶ್ ಚಂದ್ರ ಮಾಹಿತಿ ನೀಡಿದ್ದಾರೆ.