ಹುಬ್ಬಳ್ಳಿ, ಆ 07 (DaijiworldNews/HR): ಬಿಜೆಪಿ ಎಂಎಲ್ಸಿ ಬಸವರಾಜ್ ಹೊರಟ್ಟಿ ಅವರ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ ಬಳಿ ನಡೆದಿದೆ.
ಗಾಯಗೊಂಡವರನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಜೆಸಿಬಿ ಆಪರೇಟರ್ ಕೆಂಚಪ್ಪ ಎಂದು ಗುರುತಿಸಲಾಗಿದೆ.
ಗಾಯಗೊಂಡ ಕೆಂಚಪ್ಪ ಅವರನ್ನು ಕೂಡಲೇ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಇನ್ನು ಘಟನಾ ಸ್ಥಳಕ್ಕೆ ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.