ಆಂಧ್ರಪ್ರದೇಶ, ಆ 08 (DaijiworldNews/HR): ಪ್ರವಾಹದ ನೀರಿನಲ್ಲಿ ಸಿಲುಕಿದ್ದ ಇಬ್ಬರನ್ನು ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳು ರಕ್ಷಿಸಿರುವ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋವನ್ನು ಕಾನೂನು ಜಾರಿ ಸಂಸ್ಥೆಯು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರಕ್ಷಣಾ ದೋಣಿಯಲ್ಲಿ ಇಬ್ಬರು ಪುರುಷರು ಮತ್ತು ಇತರರೊಂದಿಗೆ ರಕ್ಷಣಾ ದೋಣಿಯನ್ನು ಸ್ಥಳೀಯ ನಿವಾಸಿಗಳು ಪೊಲೀಸ್ ಸಿಬ್ಬಂದಿಯೊಂದಿಗೆ ಹಗ್ಗದ ಸಹಾಯದಿಂದ ಎಳೆದು ರಕ್ಷಿಸಿದ್ದಾರೆ.
ಇನ್ನು ಓಬುಲರೆಡ್ಡಿ ಪಲ್ಲಿ ವಂಕಾ ಗ್ರಾಮದಲ್ಲಿ ಕುರಿಗಳನ್ನು ಮೇಯಿಸುತ್ತಿದ್ದಾಗ ಇಬ್ಬರು ಪ್ರವಾಹದ ನೀರಿನಲ್ಲಿ ಸಿಕ್ಕಿಹಾಕಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.