ಬೆಂಗಳೂರು, ಆ 08 (DaijiworldNews/DB): ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನಾನು ಹೇಳಿಕೆ ನೀಡುವುದು ಸರಿಯಲ್ಲ. ಬದಲಾವಣೆ ಮಾಡಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಅವರ ಬದಲಾವಣೆ ಕುರಿತು ಕೇಳಿ ಬರುತ್ತಿರುವ ಮಾತುಗಳಿಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಟೀಲು ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರದೇ ನಾಯಕತ್ವದಲ್ಲಿ ಮುಂಬರುವ ಚುನಾವಣೆ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ ಎಂದರು.
ಕಟೀಲು ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆದರೆ ಸಂತೋಷ. ಆದರೆ ಹೈಕಮಾಂಡ್ ನಿರ್ಧಾರವೇ ಅಂತಿಮ. ಆ ವಿಚಾರದಲ್ಲಿ ನಾನು ಹೇಳಿಕೆ ಕೊಡುವುದು ಸರಿಯಲ್ಲ ಎಂದವರು ತಿಳಿಸಿದರು.