ಉತ್ತರ ಪ್ರದೇಶ, ಆ 08 (DaijiworldNews/HR): 1991ರ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಉತ್ತರ ಪ್ರದೇಶದ ಸಚಿವ ರಾಕೇಶ್ ಸಚನ್ ಅವರಿಗೆ ಶಿಕ್ಷೆ ಘೋಷಿಸಲಾಗಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೇ ಅವರು ಕಾನ್ಪುರದ ನ್ಯಾಯಾಲಯದಿಂದ ಎಸ್ಕೇಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ನ್ಯಾಯಾಲಯವು ರಾಕೇಶ್ ಸಚನ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿದ್ದು, ಅವರು ಜಾಮೀನು ಬಾಂಡ್ಗಳನ್ನು ಒದಗಿಸದೇ ನ್ಯಾಯಾಲಯದಿಂದ ನಾಪತ್ತೆಯಾಗಿದ್ದಾರೆ.
ಇನ್ನು ಎಫ್ಐಆರ್ ದಾಖಲಿಸುವ ಮೊದಲು ಪೊಲೀಸ್ ದೂರಿನಲ್ಲಿ ಸಚಿವರ ವಿರುದ್ಧ ಹೊರಿಸಲಾದ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಸಹಾಯಕ ಪೊಲೀಸ್ ಆಯುಕ್ತ ಅಶೋಕ್ ಕುಮಾರ್ ಸಿಂಗ್ ಅವರಿಗೆ ಸೂಚಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಬಿಪಿ ಜೋಗ್ದಂಡ್ ಹೇಳಿದ್ದಾರೆ.