ನವದೆಹಲಿ, ಆ 08 (DaijiworldNews/HR): ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದ ಬಿಜೆಪಿಯ ಕಿಸಾನ್ ಮೋರ್ಚಾ ಸದಸ್ಯ ಶ್ರೀಕಾಂತ್ ತ್ಯಾಗಿ ಅವರ ನಿವಾಸದ ಮೇಲೆ ಬಿಜೆಪಿ ಬುಲ್ಡೋಜರ್ ದಾಳಿ ನಡೆಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ತ್ಯಾಗಿ ಅವರ ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದು, ಶ್ರೀಕಾಂತ್ ತ್ಯಾಗಿ ಅವರು ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಅಧಿಕಾರಿಗಳು ಕೆಡವಿದ್ದಾರೆ.
ಇನ್ನು ಬಿಜೆಪಿ ಕಿಸಾನ್ ಮೋರ್ಚಾ ಸದಸ್ಯ ತ್ಯಾಗಿ ಮತ್ತು ಮಹಿಳೆಯ ನಡುವೆ ಕೆಲವು ದಿನಗಳ ಹಿಂದೆ ಜಗಳ ನಡೆದಿದ್ದು, ತ್ಯಾಗಿ ಅವರು ಕೆಲವು ಸಸಿಗಳನ್ನು ನೆಡಲು ಬಯಸಿದ್ದರು. ಆದರೆ, ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಮಹಿಳೆ ಅದನ್ನು ವಿರೋಧಿಸಿದ್ದರು ಎನ್ನಲಾಗಿದ್ದು, ಇದೀಗ ಅವರ ನಿವಾಸದ ಮೇಲೆ ಬುಲ್ಡೋಜರ್ ದಾಳಿ ನಡೆಸಲಾಗಿದೆ.