ಮುಂಬೈ, ಆ 08 (DaijiworldNews/HR): ಶಿವಸೇನಾ ಸಂಸದ ಸಂಜಯ್ ರಾವುತ್ ಅವರಿಗೆ 'ಪತ್ರಾ ಚಾಲ್' ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸಂಜಯ್ ರಾವುತ್ ಅವರು ಮನೆಯ ಆಹಾರ ಮತ್ತು ಔಷಧಿಗಳಿಗಾಗಿ ಮನವಿ ಮಾಡಿದ್ದು, ಇದಕ್ಕೆ ನ್ಯಾಯಾಲಯ ಅನುಮತಿ ನೀಡಿದ್ದು, ಮನೆಯಿಂದಲೇ ಹಾಸಿಗೆ ಒದಗಿಸುವಂತೆ ಕೇಳಿದ್ದ ಮನವಿಯನ್ನು ಪುರಸ್ಕರಿಸಲು ನಿರಾಕರಿಸಿದೆ.
ಇನ್ನು ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ ರಾವುತ್ ಅವರನ್ನು ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದ್ದು, ಇಂದು ಇಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ವಿಶೇಷ ಪಿಎಂಎಲ್ಎ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಅವರ ಮುಂದೆ ಹಾಜರುಪಡಿಸಲಾಗಿದ್ದು, ಈ ವೇಳೆ ನ್ಯಾಯಾಲಯವು ರಾವುತ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.