ನೋಯ್ಡಾ, ಆ 08 (DaijiworldNews/MS): ನೋಯ್ಡಾದಲ್ಲಿ ಬಿಜೆಪಿ ಮುಖಂಡನ ಮನೆಯನ್ನು ಬುಲ್ಡೋಜರ್ ಬಳಸಿ ಧ್ವಂಸ ಮಾಡಿರುವುದು ಕೇವಲ ಪ್ರದರ್ಶನಕ್ಕಾಗಿ ಮಾತ್ರ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಆರೋಪಿಸಿದ್ದಾರೆ.
ನೋಯ್ಡಾದ ಹೌಸಿಂಗ್ ಸೊಸೈಟಿಯ ಮಹಿಳೆಯೊಬ್ಬರ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಬಿಜೆಪಿಯ ಕಿಸಾನ್ ಮೋರ್ಚಾದ ಸದಸ್ಯ ಶ್ರೀಕಾಂತ್ ತ್ಯಾಗಿಯ ಕಾನೂನು ಬಾಹಿರ ಆಸ್ತಿಗಳನ್ನು ಗುರುತಿಸಿ ಯೋಗಿ ಸರ್ಕಾರ ಸೋಮವಾರ ಬೆಳಿಗ್ಗೆ ಬುಲ್ಡೋಜರ್ ಬಳಸಿ ಧ್ವಂಸ ಮಾಡಿತ್ತು. ಈ ವಿಚಾರ ಭಾರೀ ಚರ್ಚೆಗೆ ಒಳಗಾಗಿತ್ತು.
ಈ ವಿಚಾರವಾಗಿ ಟ್ವೀಟ್ ಮಾಡಿ ಹರಿಹಾಯ್ದ ಪ್ರಿಯಾಂಕ . ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ನಿರ್ಮಿಸಿದ ಕಟ್ಟಡವು ಅಕ್ರಮ ಎಂದು ಬಿಜೆಪಿ ಸರ್ಕಾರಕ್ಕೆ ಇಷ್ಟು ವರ್ಷಗಳಿಂದ ತಿಳಿದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಲು ಮತ್ತು 10-15 ಗೂಂಡಾಗಳನ್ನು ಕಳುಹಿಸುವ ಮೂಲಕ ಮಹಿಳೆಯರಿಗೆ ಬಹಿರಂಗವಾಗಿ ಬೆದರಿಕೆ ಹಾಕಲು ಅವರಿಗೆ ಯಾರು ಧೈರ್ಯ ನೀಡುತ್ತಿದ್ದಾರೆ? ಅವರನ್ನು ಉಳಿಸಿದವರು ಯಾರು,” ಎಂದು ಪ್ರಶ್ನಿಸಿದ್ದಾರೆ.