ನವದೆಹಲಿ, ಆ 10 (DaijiworldNews/MS): ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಗುರುವಾರ ಕೋವಿಡ್-19 ಪಾಸಿಟಿವ್ ಇರುವುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, "ಇಂದು ಕೋವಿಡ್ ಪರೀಕ್ಷೆಯಲ್ಲಿ (ಮತ್ತೊಮ್ಮೆ!) ಪಾಸಿಟಿವ್ ಬಂದಿದ್ದು, ಈಗ ಮನೆಯಲ್ಲಿಯೇ ಐಸೋಲೇಟ್ ಆಗಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿಸಿದ್ದಾರೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.
ಇನ್ನೊಂದೆಡೆ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕೊವೀಡ್ ತಗುಲಿರುವುದು ದೃಢಪಟ್ಟಿದೆ. ಅವರು ಕೂಡ ಹೋಂ ಐಸೋಲೇಷನ್ ಆಗಿದ್ದು, ತಮ್ಮ ಸಂಪರ್ಕಿತರು ಪರೀಕ್ಷೆಗೆ ಒಳಪಡುವಂತೆ ಕೋರಿದ್ದಾರೆ.