ಪಾಟ್ನಾ, ಆ 10 (DaijiworldNews/MS): ಬಿಹಾರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯ ಸಖ್ಯ ತೊರೆದ ಜೆಡಿಯು ನಾಯಕ ನಿತೇಶ್ ಕುಮಾರ್ "ಮುಖ್ಯಮಂತ್ರಿ" ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು, ಜೊತೆಗೆ ಆರ್ ಜೆಡಿ ನೇತೃತ್ವದ ಮಹಾಘಟಬಂಧನದೊಂದಿಗೆ ಕೈ ಜೋಡಿಸಿ ಹೊಸ ಸರ್ಕಾರ ರಚನೆ ಹಕ್ಕು ಮಂಡಿಸಿದ್ದಾರೆ.
ಅದರಂತೆ ಅವರು ಬುಧವಾರ ಮಧ್ಯಾಹ್ನ 2 ಗಂಟೆಗೆ ಸತತ 8ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಪಡೆದುಕೊಳ್ಳಲಿದ್ದಾರೆ.
ನಿತೀಶ್ ಅವರು ತಮಗೆ 164 ಶಾಸಕರ ಬೆಂಬಲ ಇದೆ ಎಂದಿದ್ದಾರೆ. ಈ ಶಾಸಕರ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ವಿಧಾನಸಭೆಯ ಸದಸ್ಯ ಬಲ 242. ಸರಳ ಬಹುಮತಕ್ಕೆ 123 ಶಾಸಕರ ಬೆಂಬಲ ಬೇಕಾಗಿದೆ.
ಬಿಹಾರದ ರಾಜಕೀಯ ಬೆಳವಣಿಗೆ ಮುಂದಿನ ಲೋಕಸಭೆ ಚುನಾವಣೆ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ