ಬೆಂಗಳೂರು, ಆ 10 (DaijiworldNews/DB): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಮುಂದಿನ ಎಂಟು ತಿಂಗಳ ಕಾಲ ಬೊಮ್ಮಾಯಿಯವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ನಗರದಲ್ಲಿಂದು ಮಾತನಾಡಿದ ಅವರು, ಸಿಎಂ ಬದಲಾವಣೆ ಮಾತುಗಳು ಕೇವಲ ಊಹಾಪೋಹ. ಸಿಎಂ ಬದಲಾವಣೆ ಚರ್ಚೆ ಇಲ್ಲಿಗೇ ನಿಲ್ಲಬೇಕು ಎಂದರು.
ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯಾಧ್ಯಕ್ಷರ ಬದಲಾವಣೆ ಸಂಬಂಧಿಸಿದಂತೆ ಸಹಜ ಬದಲಾವಣೆಯಾಗಿದ್ದು, ಈ ಬಗ್ಗೆ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದವರು ಪ್ರತಿಕ್ರಿಯಿಸಿದರು.