ಪಾಟ್ನಾ, ಆ 10 (DaijiworldNews/MS): ಜೆಡಿ(ಯು) ನಾಯಕ ನಿತೀಶ್ ಕುಮಾರ್ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಎನ್ಡಿಎ ಮೈತ್ರಿ ಸರ್ಕಾರದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಮಹಾಘಟಬಂಧನದ ಬಳಿಕ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಒಂದು ದಿನದ ನಂತರ ನಿತೀಶ್ ಕುಮಾರ್ ಬುಧವಾರ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು
ಆಗಸ್ಟ್ 15ರ ನಂತರ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ವರದಿಗಳು ತಿಳಿಸಿವೆ. ಪ್ರಮಾಣವಚನ ಸಮಾರಂಭದಲ್ಲಿ ತೇಜಸ್ವಿ ಯಾದವ್ ಪತ್ನಿ ರಾಜಶ್ರೀ, ಮಾಜಿ ಸಿಎಂ ರಾಬ್ರಿ ದೇವಿ, ಆರ್ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಪಾಲ್ಗೊಂಡಿದ್ದರು.