ರಜೌರಿ, ಆ 11 (DaijiworldNews/MS): ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿರುವ ಸೇನಾ ಶಿಬಿರದ ಮೇಲೆ ಇಬ್ಬರು ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಎನ್ಕೌಂಟರ್ನಲ್ಲಿ ಇಬ್ಬರೂ ಉಗ್ರರು ಹತರಾಗಿದ್ದಾರೆ.
ರಜೌರಿಯಿಂದ 25 ಕಿ.ಮೀ ದೂರದ ದರ್ಹಾಲ್ನಲ್ಲಿರುವ ಆರ್ಮಿಕ್ಯಾಂಪ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಮೂವರು ಸೈನಿಕರು ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಕಾರ್ಯಾಚರಣೆ ಪ್ರಗತಿಯಲ್ಲಿದೆ ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಜಮ್ಮು ಎಡಿಜಿಪಿ ಮುಕೇಶ್ ಸಿಂಗ್, ರಜೌರಿಯ ದರ್ಹಾಲ್ ಪ್ರದೇಶದ ಪರ್ಗಲ್ನಲ್ಲಿರುವ ಸೇನಾ ಶಿಬಿರದ ಬೇಲಿಯನ್ನು ದಾಟಲು ಯಾರೋ ಪ್ರಯತ್ನಿಸಿದ್ದಾರೆ. ಈ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಮೂವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ.