ಬೆಂಗಳೂರು, ಆ 11 (DaijiworldNews/MS): ಕೋವಿಡ್ ಸೋಂಕಿಗೆ ತುತ್ತಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೀಗ ಗುಣಮುಖರಾಗಿದ್ದು ಇಂದಿನಿಂದ ಮೈಸೂರು, ಮಂಡ್ಯ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ದೆಹಲಿ ಪ್ರಯಾಣವನ್ನು ರದ್ದುಪಡಿಸಿ ವಿಶ್ರಾಂತಿಯಲ್ಲಿದ್ದರು. ಕೊವಿಡ್ 19 ಖಚಿತಪಟ್ಟಿರುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಟ್ವೀಟ್ ಮೂಲಕ ದೃಢಪಡಿಸಿದ್ದರು.ಇದೀಗ ಸಿಎಂ ಗುಣಮುಖರಾಗಿದ್ದು, ಇಂದು ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಪ್ರಯುಕ್ತ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ವಿಡಿಯೋ ಸಂವಾದದ ಮೂಲಕ ಸಿಎಂ ಬೊಮ್ಮಾಯಿ ಭಾಗಿಯಾಗಿದ್ದರು.