ಶಿವಮೊಗ್ಗ, ಆ 11 (DaijiworldNews/HR): ಬಿಜೆಪಿಯವರು ಕಾಶ್ಮೀರಿ ಫೈಲ್ಸ್ ಸಿನಿಮಾವನ್ನು ಉಚಿತವಾಗಿ ತೋರಿಸಿ ಈಗ ಧ್ವಜಕ್ಕೆ ದುಡ್ಡು ಪಡೆಯುತ್ತಿದ್ದಾರೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ.
'ಹರ್ ಘರ್ ತಿರಂಗಾ' ಅಭಿಯಾನದ ಅಂಗವಾಗಿ ರಾಷ್ಟ್ರಧ್ವಜವನ್ನು ಮಾರಾಟ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಬದಲಿಸುತ್ತೇವೆ, ಧ್ವಜ ಬದಲಾಯಿಸುತ್ತೇವೆ ಎಂದು ಹೇಳಿದ್ದ ಬಿಜೆಪಿಯವರು ಈಗ 'ಹರ್ ಘರ್ ತಿರಂಗಾ' ಕಾರ್ಯಕ್ರಮವನ್ನು ಮಾಡಲು ಹೊರಟಿದ್ದಾರೆ ಎಂದರು.
ಇನ್ನು ಸಂವಿಧಾನ ಬದಲಿಸುವ ಶಕ್ತಿ ಬಿಜೆಪಿಗಿದ್ದರೆ ಸರ್ಕಾರವನ್ನೇ ಬದಲಿಸುವ ಶಕ್ತಿಯನ್ನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಪ್ರಜೆಗಳಿಗೆ ನೀಡಿದ್ದಾರೆ ಎಂಬುದು ನೆನಪಿರಲಿ ಎಂದು ಹೇಳಿದ್ದಾರೆ.