ಹುಬ್ಬಳ್ಳಿ, ಆ 11 (DaijiworldNews/HR): ಸ್ನೇಹಿತರೊಂದಿಗೆ ಆನ್ ಲೈನ್ ಗೇಮ್ನಲ್ಲಿ ಆಟ ಆಡಿ ಕೋಟ್ಯಂತರ ರೂಪಾಯಿ ಗೆದ್ದಿದ್ದ ಯುವಕನಿಗೆ ಅವನ ಸ್ನೇಹಿತರೇ ಕಿಡ್ನಾಪ್ ಮಾಡಿ 1 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದ ಘಟನೆಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ.
ಆನ್ಲೈನ್ ಗೇಮ್ನಲ್ಲಿ ಹಣ ಗೆದ್ದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಗರೀಬ್ ನವಾಜ್ ಮುಲ್ಲಾನನ್ನು ಆಗಸ್ಟ್ 6 ರಂದು ಅಪಹರಿಸಿ ಒಂದು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಏಳು ಮಂದಿ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಹುಬ್ಬಳ್ಳಿಯ ಮಹ್ಮದ್ ಆರಿಫ್, ಇಮ್ರಾನ್, ಅಬ್ದುಲ್ ಕರೀಮ್, ಹುಸೇನ್ ಸಾಬ್, ಇಮ್ರಾನ್ ಮದರಲಿ, ತೌಸಿಫ್ ಮತ್ತು ಮಹಮ್ಮದ್ ರಜಾಕ್ ಎಂದು ಗುರುತಿಸಲಾಗಿದೆ.
ಅಪಹರಣಕಾರರು ಗರೀಬ್ ನವಾಜ್ ತಂದೆಗೆ ಕರೆ ಮಾಡಿ ಒಂದು ಕೋಟಿ ಬೇಡಿಕೆ ಇಟ್ಟಿದ್ದು, ಇದಕ್ಕೆ ಒಪ್ಪದಿದ್ದಾಗ 15 ಲಕ್ಷ ನೀಡಬೇಕು ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆಗಸ್ಟ್ 6ರಂದು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಆತನ ತಂದೆ ದೂರು ದಾಖಲಿಸಿದ್ದರು.
ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಹುಬ್ಬಳ್ಳಿ ಧಾರವಾಡ ಕಮಿಷನರ್ ಲಾಭೂರಾಮ್ ಆರೋಪಿಗಳ ಪತ್ತೆಗಾಗಿ ನಾಲ್ಕು ಪ್ರತ್ಯೇಕ ತನಿಖಾ ತಂಡಗಳನ್ನು ರಚಿಸಿ ಬಂಧಿಸಿದ್ದಾರೆ.