ಕಲಬುರ್ಗಿ, ಆ 11 (DaijiworldNews/MS): ಮೂವರು ಮಕ್ಕಳನ್ನು ಬಾವಿಗೆ ದೂಡಿ, ತಾನೂ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಂದ ತಾಲೂಕಿನ ಮಾದರ ಹಿಪ್ಪರಗ ತಾಲೂಕಿನಲ್ಲಿ ನಡೆದಿದೆ.
ಕೌಟುಂಬಿಕ ಕಲಹಕ್ಕೆ ಮನನೊಂದು ಮೂವರು ಮಕ್ಕಳೊಂದಿಗೆ ಬಾವಿಗೆ ದೂಡಿ ಅಂಬಿಕಾ(32) ಆತ್ಮಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.
ಮೂವರು ಮಕ್ಕಳ ಸಹಿತ ನಾಲ್ವರು ಸಾವನ್ನಪ್ಪಿದ್ದಾರೆ. ಮಾದರ ಹಿಪ್ಪರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಪ್ರಕರಣದಲ್ಲಿ ಕೊಲೆ ಶಂಕೆಯೂ ವ್ಯಕ್ತವಾಗಿದೆ.