ಬೆಂಗಳೂರು , ಆ 11 (DaijiworldNews/HR): ವೀಸಾ ಅವಧಿ ಮುಗಿದ ನಂತರವೂ ದೇಶದಲ್ಲಿ ವಾಸಿಸುತ್ತಿರುವ ಅಕ್ರಮ ವಲಸಿಗರನ್ನು ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಗಡಿಪಾರು ಮಾಡುವುದು ಅವಶ್ಯಕವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ವೀಸಾ ಅವಧಿ ಮುಗಿದ ನಂತರವೂ ದೇಶದಲ್ಲಿ ವಾಸಿಸುತ್ತಿರುವ ಅಕ್ರಮ ವಲಸಿಗರನ್ನು ಹೊರಹಾಕುಬೇಕು, ಅವರು ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗುವ ಮೂಲಕ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯನ್ನು ಒಡ್ಡಬಹುದು ಎಂದರು.
ಇನ್ನು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ವಿದೇಶಿಯರಿಗಾಗಿ ಅಸ್ತಿತ್ವದಲ್ಲಿರುವ ಬಂಧನ ಕೇಂದ್ರಗಳ ಸಾಮರ್ಥ್ಯವನ್ನು ತಕ್ಷಣವೇ ವಿಸ್ತರಿಸುವ ಅಗತ್ಯದ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದ್ದಾರೆ.