ಬೆಂಗಳೂರು, ಆ 11 (DaijiworldNews/HR): ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕೊಚ ಏರಿಕೆ ಕಂಡಿದ್ದು, ಆಸ್ಪತ್ರೆಯಲ್ಲಿ ಕೊರೊನಾ ಪೀಡಿತರಿಗೆ ಯಾವ ರೀತಿ ಚಿಕಿತ್ಸೆ ನೀಡಬೇಕೆಂದು ಚರ್ಚೆ ನಡೆಸಲಾಗುತ್ತದೆ ಎಂದರು.
ಇನ್ನು ಕೊರೊನಾ ಸೋಂಕಿತರಿಗೆ ಶೇ 10 ರಷ್ಟು ಹಾಸಿಗೆ ಮೀಸಲಿಡಬೇಕು. ಯಾವುದೇ ಕಾರಣಕ್ಕೂ ಅವರು ಚಿಕಿತ್ಸೆ ನಿರಾಕರಿಸಬಾರದು. ಈ ಬಗ್ಗೆ ಇಂದು ಈ ಬಗ್ಗೆ ಆದೇಶ ಮಾಡುತ್ತೇವೆ ಎಂದು ತಿಳಿಸಿದ್ದಾರೆ.