ನವದೆಹಲಿ,ಆ 11 (DaijiworldNews/MS): ಜಗದೀಪ್ ಧನಕರ್ ದೇಶದ 14ನೇ ಉಪ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಗದೀಪ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೊವೀಂದ್, ಪ್ರಧಾನಿ ನರೇಂದ್ರ ಮೋದಿ , ಲೋಕಸಭಾ ಸ್ಪೀಕರ್ ಒಂಪ್ರಕಾಶ್ ಬಿರ್ಲಾ , ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತಿತರರು ಉಪಸ್ಥಿತರಿದ್ದರು.
ಇತ್ತೀಚೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅವರು ತಮ್ಮ ಎದುರಾಳಿ ಮಾರ್ಗರೇಟ್ ಆಳ್ವಾರವರ ವಿರುದ್ಧ ಗೆಲುವು ಪಡೆದಿದ್ದರು. ಆ. 7ರಂದು ಅವರಿಗೆ ಭಾರತೀಯ ಚುನಾವಣಾ ಆಯೋಗವು ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಗ್ಗೆ ಪ್ರಮಾಣಪತ್ರ ಹಸ್ತಾಂತರಿಸಿದೆ.
ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲರಾಗಿದ್ದ ಜಗದೀಪ್ ಧನಕರ್ ರಾಜ್ಯಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.71 ವರ್ಷದ ಜಗದೀಪ್ ಧನಕರ್ ಕಳೆದ 6 ಉಪರಾಷ್ಟ್ರಪತಿ ಚುನಾವಣೆಗಳಲ್ಲಿ ಶೇ.74ಕ್ಕೂ ಅಧಿಕ ಮತಗಳನ್ನು ಗಳಿಸಿ ವಿಜಯಿಯಾದ ಅಭ್ಯರ್ಥಿಯಾಗಿದ್ದಾರೆ.