ಮೈಸೂರು,ಆ 11 (DaijiworldNews/HR): ಮುಖ್ಯಮಂತ್ರಿ ಬದಲಾವಣೆ ಕಾಂಗ್ರೆಸ್ ಕೃಪಾ ಪೋಷಿತನಾಟಕ ಮಂಡಳಿ ಸೃಷ್ಟಿಸಿರುವ ದೊಡ್ಡ ಸುಳ್ಳು ಎಂದು ಸಹಕಾರ ಸಚಿವ ಎಸ್ಟಿ ಸೋಮಶೇಖರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಒಳ ಬೇಗುದಿ ಆರಂಭವಾಗಿದ್ದು, ಶಮನ ಮಾಡಿಕೊಳ್ಳಲು ಬಿಜೆಪಿ ಮೇಲೆ ಬಾಣ ಪ್ರಯೋಗಿಸಿದ್ದಾರೆ. ಅವರು ಇವರ ಮೇಲೆ, ಇವರು ಅವರ ಮೇಲೆ ಆಪಾದನೆ ಮಾಡ್ತಿದ್ದಾರೆ. ಆಪಾದನೆ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದರು.
ಇನನು ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಅವರಿಗೆ ಡಿ.ಕೆ.ಶಿವಕುಮಾರ್ ಟೋಪಿ ಹಾಕುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಟೋಪಿ ಹಾಕುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಸಿದ್ದರಾಮೋತ್ಸವದ ಕಿಡಿ ಈಗ ಬೆಂಕಿಯಾಗಿ ಹೊತ್ತಿ ಉರಿಯುತ್ತಿದದು, ಈ ವಿಚಾರವನ್ನು ಡೈವರ್ಟ್ ಮಾಡಲು ಸಿಎಂ ಬದಲಾವಣೆ ವದಂತಿ ಸೃಷ್ಟಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.