ಕೊಪ್ಪಳ, ಆ 11 (DaijiworldNews/HR): ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಸಂಭವಿಸಿದ ಮಾರಾಮಾರಿಯಲ್ಲಿ ಇಬ್ಬರುಮೃತಪಟ್ಟು, 6 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರನ್ನು ಯಂಕಪ್ಪ ತಳವಾರ (60), ಭಾಷಾಸಾಬ್ (22) ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಸಿಆರ್ಪಿಸಿ ಸೆಕ್ಷನ್ 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಈ ನಿಷೇಧಾಜ್ಞೆಯು ಆಗಸ್ಟ್ 20ರವರೆಗೆ ಜಾರಿಯಲ್ಲಿರುತ್ತದೆ ಎಂದು ಕೊಪ್ಪಳ ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲ್ಲಶೆಟ್ಟಿ ಆದೇಶ ನೀಡಿದ್ದಾರೆ.
ಇಂದು ಬೆಳ್ಳಗ್ಗೆ ಗಲಭೆ ನಡೆದಿದ್ದು, ಮನೆಗಳ ಮುಂದೆ ನಿಲ್ಲಿಸಿದ್ದ ಬೈಕ್, ಟಾಟಾ ಏಸ್ ಸೇರಿದಂತೆ ಹಲವು ವಾಹನಗಳನ್ನು ಜಖಂ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.