ಪಾಟ್ನಾ,ಆ 11 (DaijiworldNews/HR): ಕೇಂದ್ರದ ಸಿಬಿಐ ಮತ್ತು ಇ.ಡಿ ಸಂಸ್ಥೆಗಳಿಗೆ ನಾನು ಹೆದರುವುದಿಲ್ಲ ಎಂದು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯು ರಾಜಕೀಯ ವಿರೋಧಿಗಳನ್ನು ಮಣಿಸಲು ಕೇಂದ್ರದ ತನಿಖಾ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಬಿಜೆಪಿಯವರಿಗೆ ಶಾಂತಿ ಸಿಗುತ್ತದೆ ಎಂದಾದರೆ ನನ್ನ ಮನೆಯಲ್ಲೇ ನಾನು ಎರಡೂ ತನಿಖಾ ಸಂಸ್ಥೆಗಳಿಗೆ ಕಚೇರಿ ತೆರೆಯಲು ಅವಕಾಶ ನೀಡುತ್ತೇನೆ ಎಂದರು.
ಇನ್ನು ಸರ್ಕಾರಿ ಇಲಾಖೆಗಳಲ್ಲಿ ಹಲವು ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವ ಮೂಲಕವೇ ನಾವು ಉದ್ಯೋಗ ಸೃಷ್ಟಿಯನ್ನು ಪ್ರಾರಂಭಿಸುತ್ತೇವೆ. ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ ನಂತರ ನಾವು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ಹೇಳಿದ್ದಾರೆ.