ಪಟ್ನಾ, ಆ 11 (DaijiworldNews/DB): ಬಿಹಾರದಲ್ಲಿ ನೂತನ ಸರ್ಕಾರ ರಚನೆ ಮಾಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಗಸ್ಟ್ 24ರಂದು ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ.
ಬಿಜೆಪಿಯೊಂದಿಗೆ ಮೃತ್ರಿ ಮುರಿದು ಎನ್ಡಿಎ ಮೈತ್ರಿಕೂಟದಿಂದ ಹೊರ ಬಂದಿರುವ ನಿತೀಶ್ಕುಮಾರ್ ಆರ್ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಸೇರಿ ಬುಧವಾರವೇ ಮಹಾಘಟಬಂಧನ ಸರ್ಕಾರ ರಚನೆ ಮಾಡಿದ್ದಾರೆ. ನೂತನ ಸರ್ಕಾರದಲ್ಲಿ ನಿತೀಶ್ಕುಮಾರ್ ಸಿಎಂ ಆಗಿಯೂ, ಆರ್ಜೆಡಿಯ ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿಯೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಸರ್ಕಾರ ರಚನೆಯಾದ ಬಳಿಕ ವಿಶ್ವಾಸಮತ ಯಾಚನೆ ಮಾಡುವುದು ಅಗತ್ಯವಾಗಿದೆ. ಹೀಗಾಗಿ ಆ. 24ಕ್ಕೆ ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆಗೆ ದಿನ ನಿಗದಿಯಾಗಿದೆ.
ಸದ್ಯ 165ಕ್ಕಿಂತಲೂ ಹೆಚ್ಚು ಸದಸ್ಯ ಬಲ ಹೊಂದಿರುವ ಮಹಾಘಟಬಂಧನ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸುವುದು ಸುಲಭವಾಗಲಿದೆ.