ಬೆಂಗಳೂರು, ಆ 12 (DaijiworldNews/MS): ಕನ್ನಡ ಸಾಂಸ್ಕೃತಿಕ ಲೋಕದ ಮಹಾನ್ ಪ್ರತಿಭೆ, ಸುಗಮ ಸಂಗೀತದ ಪ್ರಸ್ಥಿದ್ದ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಆಗಸ್ಟ್ 11 ರ ಗುರುವಾರ ರಾತ್ರಿ 10.30ಕ್ಕೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ.
ಕಾಡುಕುದುರೆ' ಚಿತ್ರದ 'ಕಾಡು ಕುದುರೆ ಓಡಿ ಬಂದಿತ್ತ' ಹಾಡಿನ ಹಿನ್ನೆಲೆ ಗಾಯನಕ್ಕೆ ಶಿವಮೊಗ್ಗ ಸುಬ್ಬಣ್ಣ ಅವರಿಗೆ ರಾಷ್ಟ್ರ ಪ್ರಶಸ್ತಿ ಒಲಿದುಬಂದಿತ್ತು. ಈ ಮೂಲಕ ಗಾಯನಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ಎಂಬ ಖ್ಯಾತಿ ಪಡೆದಿದ್ದಾರೆ.
ಕನ್ನಡದ ಕಾವ್ಯವನ್ನು ಸಂಗೀತಕ್ಕೆ ಹೊಂದಿಸುವ ಪ್ರಕಾರವಾದ 'ಸುಗಮ ಸಂಗೀತ' ಕ್ಷೇತ್ರದಲ್ಲಿ ಹೆಸರುವಾಸಿಯಾದ ಸುಬ್ಬಣ್ಣ ಅವರು ಕುವೆಂಪು ಮತ್ತು ದ.ರಾ.ಬೇಂದ್ರೆಯಂತಹ ಪ್ರಸಿದ್ಧ ಕವಿಗಳ ಕವನಗಳಿಗೆ ಕೆಲಸ ಮಾಡಿದ್ದಾರೆ ಮತ್ತು ಹಾಡಿದ್ದಾರೆ. ವಕೀಲರಾಗಿ ವೃತ್ತಿ ಬದುಕು ಆರಂಭಿಸಿದ ಇವರು ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಗಾಯಕರಾಗಿದ್ದರು.
ಮಕ್ಕಳಾದ ಶ್ರೀರಂಗ ಮತ್ತು ಬಾಗೇಶ್ರೀ ಅವರನ್ನು ಅಗಲಿದ್ದಾರೆ. ಶಿವಮೊಗ್ಗ ಸುಬ್ಬಣ್ಣ ಅವರ ಸೊಸೆ ಅರ್ಚನಾ ಉಡುಪ ಸಹ ಖ್ಯಾತ ಗಾಯಕಿಯಾಗಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರು ಇವರ ಅಂತಿಮ ದರ್ಶನ ಪಡೆಯಬಹುದು. ಬೆಂಗಳೂರಿನಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಶಿವಮೊಗ್ಗ ಸುಬ್ಬಣ್ಣನವರ ಮಗ ಶ್ರೀರಂಗ ತಿಳಿಸಿದ್ದಾರೆ.