ನವದೆಹಲಿ, ಆ 12 (DaijiworldNews/MS): ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ತಯಾರಿಗಳಿಗೆ ಚಾಲನೆ ಸಿಕ್ಕಿದ್ದು, ಆದರೆ ರಾಷ್ಟ್ರೀಯ ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಲು ಈ ಬಾರಿ ರಾಹುಲ್ ಗಾಂಧಿ ನಿರಾಸಕ್ತಿ ತೋರಿದ್ದಾರೆ.
ಚುನಾವಣೆಯ ಪ್ರಕ್ರಿಯೆ ಆಗಸ್ಟ್ 20ರಂದು ಆರಂಭವಾಗಲಿದ್ದು, ಸೆಪ್ಟೆಂಬರ್ 20ರ ವೇಳೆಗೆ ಈ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯವಾಗಿ ಸೋತ ಬಳಿಕ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಚುನಾವಣೆಯ ಪ್ರಕ್ರಿಯೆಯ ಹಿನ್ನಲೆಯಲ್ಲಿ ಕೆಲ ಕಾಂಗ್ರೆಸಿಗರು ರಾಹುಲ ಅವರನ್ನು ಭೇಟಿ ಮಾಡಿ ಮನವೊಲಿಸಲು ಮುಂದಾಗಿದ್ದರು. ಈ ವೇಳೆ ಬಿಜೆಪಿ ವಿರುದ್ದ ಹೋರಡಲು ಅಧ್ಯಕ್ಷ ನಾಗಿರಬೇಕು ಎಂದೇನಿಲ್ಲ. ಇರುವ ಸ್ಥಾನಮಾನ ಬದಲಿಸಿಕೊಳ್ಳಲು ಇಷ್ಟವಿಲ್ಲವೆಂದು ಹೇಳಿದ್ದಾರೆ ಎಂದು ವರದಿಯಾಗಿದೆ.
ಪಕ್ಷದ ಹಿರಿಯ ನಾಯಕರ ಮನವೊಲಿಕೆಗೆ ರಾಹುಲ್ ಮಣಿಯದಿದ್ದರೆ ಅಧ್ಯಕ್ಷ ಸ್ಥಾನ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಇವರ ಪೈಕಿ ಯಾರಾದರೂ ಆಯ್ಕೆ ಆಗಬಹುದು ಎಂದು ಲೆಕ್ಕಚಾರ ಹಾಕಲಾಗಿದೆ.