ಬೆಂಗಳೂರು, ಆ 12 (DaijiworldNews/HR): ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವನ್ನು ರದ್ದುಪಡಿಸಿ ಲೋಕಾಯುಕ್ತಕ್ಕೆ ಶಕ್ತಿ ತುಂಬುವ ತೀರ್ಪನ್ನು ರಾಜ್ಯ ಹೈಕೋರ್ಟ್ ನೀಡಿದ್ದು, ಅದನ್ನು ಸ್ವಾಗತಿಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ಸರಿಯಾಗಿದ್ದು, ಸರ್ಕಾರ ಲೋಕಾಯುಕ್ತರ ವಿರೋಧವಾಗಿರಲಿಲ್ಲ. ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಿದೆ ಎಂದರು.
ಇನ್ನು ಬಿಜೆಪಿ ಮತ್ತು ಆರ್ಎಸ್ಎಸ್ನವರಿಗೆ ರಾಷ್ಟ್ರಭಕ್ತಿ ಭಾವನೆ ಬಗ್ಗೆ ಯಾರೂ ಪಾಠ ಮಾಡಬೇಕಿಲ್ಲ. ಚಿಕ್ಕಂದಿನಿಂದಲೂ ಆರ್ಎಸ್ಎಸ್ನಲ್ಲಿ ರಾಷ್ಟ್ರಭಕ್ತಿಯ ಸಂಸ್ಕಾರವನ್ನು ಪಡೆದಿದ್ದೇವೆ. ಅದರ ಬಗ್ಗೆ ಯಾರೂ ಹೇಳಿಕೊಡಬೇಕಾದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.