ಕೋಲ್ಕತಾ, ಆ 12 (DaijiworldNews/DB): ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರಿಬ್ಬರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದ ಬೆನ್ನಲ್ಲೇ ಪಕ್ಷದ ಪ್ರಭಾವಿ ಮುಖಂಡರೊಬ್ಬರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಟಿಎಂಸಿ ಪ್ರಭಾವಿ ಮುಖಂಡ ಪವನ್ ಕೆ. ವರ್ಮಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದವರು. ಈ ಕುರಿತು ಟ್ವೀಟ್ ಮಾಡಿರುವ ವರ್ಮಾ, ಪಕ್ಷದಲ್ಲಿ ನನಗೆ ನೀಡಿದ ಸ್ವಾಗತ, ಪ್ರೀತಿ, ಸೌಜನ್ಯಕ್ಕಾಗಿ ಧನ್ಯವಾದಗಳು. ನಿಮಗೆ ನನ್ನ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ನನ್ನ ರಾಜೀನಾಮೆಯನ್ನು ದಯವಿಟ್ಟು ಸ್ವೀಕಾರ ಮಾಡಿ ಎಂದು ಬರೆದುಕೊಂಡಿದ್ದಾರೆ.
ಜೆಡಿಯುವಿನಲ್ಲಿದ್ದ ಪವನ್ ಕೆ. ವರ್ಮಾ ಆ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಸಂಸದರೂ ಆಗಿದ್ದರು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಯು ವಿರುದ್ದ ಮಾತನಾಡಿದ್ದಕ್ಕಾಗಿ ಜೆಡಿಯುವಿನಿಂದ ಅವರನ್ನು ವಜಾಗೊಳಿಸಲಾಗಿತ್ತು. ಬಳಿಕ ಕಳೆದ ವರ್ಷ ತೃಣಮೂಲ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.