ಉತ್ತರ ಪ್ರದೇಶ, ಆ 12 (DaijiworldNews/HR): ಯಮುನಾ ನದಿಯಲ್ಲಿ ಗುರುವಾರ ದೋಣಿ ಮಗುಚಿ ಬಿದ್ದು 25 ಜನರು ನಾಪತ್ತೆಯಾಗಿದ್ದು ಅವರಲ್ಲಿ ಈವರಗೆ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ನೆರವಿಗಾಗಿ ಪ್ರಯಾಗ್ರಾಜ್ನಿಂದ ಮುಳುಗು ತಜ್ಞರನ್ನು ಸಹ ಕರೆಸಲಾಗಿದೆ.
ಇನ್ನು ದುರಂತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕ ವಿಪಿನ್ ಮಿಶ್ರಾ ತಿಳಿಸಿದ್ದಾರೆ.
ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮೃತರ ಕುಟುಂಬಕ್ಕೆ ವಿಪತ್ತು ಪರಿಹಾರ ನಿಧಿಯಿಂದ ತಲಾ 4 ಲಕ್ಷ ಪರಿಹಾರ ನೀಡಲು ಸೂಚನೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.