ಮೈಸೂರು, ಆ 12 (DaijiworldNews/SM): "ಹೈಕೋರ್ಟ್ ತೀರ್ಪಿನಿಂದ ಲೋಕಾಯುಕ್ತಕ್ಕೆ ಮತ್ತೆ ಬಲ ಬಂದಿದೆ. ಭ್ರಷ್ಟಾಚಾರಿಗಳಿಗೆ ನಡುಕ ಹುಟ್ಟಿದೆ. ಮೂರು ಪಕ್ಷದವರೂ ಈ ತೀರ್ಪುನ್ನು ವಿರೋಧಿಸಬಹುದು" ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಎಸಿಬಿಯಿಂದ ಒಬ್ಬ ಜನಪ್ರತಿನಿಧಿಗೆ ಶಿಕ್ಷೆ ಆಗಿಲ್ಲ. ಒಬ್ಬ ಶಾಸಕನನ್ನು ಕೂಡ ವಿಚಾರಣೆ ಮಾಡಿಲ್ಲ. ಆದರೆ ಈಗ ಕೋರ್ಟ್ ಎಸಿಬಿಯನ್ನು ರದ್ದುಗೊಳಿಸಿದೆ. ಹೈಕೋರ್ಟ್ ತೀರ್ಪು ಲೋಕಾಯುಕ್ತಕ್ಕೆ ಮತ್ತೆ ಬಲವನ್ನು ತಂದುಕೊಟ್ಟಿದೆ. ಇದರಿಂದ ಭ್ರಷ್ಟಾಚಾರಿಗಳಿಗೆ ನಡುಕ ಹುಟ್ಟಿದೆ" ಎಂದು ತಿಳಿಸಿದ್ದಾರೆ.
ಮೈಸೂರು ದಸರಾ ಸಂಭ್ರಮ: ತೂಕ ಪರೀಕ್ಷೆಯಲ್ಲಿ ಯಾವ ಆನೆ ಬಲಶಾಲಿ? "ಹೈಕೋರ್ಟ್ ತೀರ್ಪು ವಿರೋಧಿಸಿದ ಕೆಲವರು ಸುಪ್ರೀಂಕೋರ್ಟ್ ಮೊರೆ ಹೋದರೆ ಅಧಿಕಾರ ಕಳೆದುಕೊಳ್ಳುವ ಭಯ ಇದೆ. ಚುನಾವಣೆ ಸಮೀಪಿಸುತ್ತಿರುವುದು ಇದಕ್ಕೆ ಪ್ರಮುಖ ಕಾರಣ. ಹಾಗಾಗಿ ಹಿಂಬಾಲಕರು ಹಿಂಬಾಗಿಲ ಮೂಲಕ ಸುಪ್ರೀಂಮೊರೆ ಹೋಗಬಹುದು. ರಾಜ್ಯದಲ್ಲಿ ಪ್ರವಾಹ ಉಂಟಾಗಿ ಸಾವಿರಾರು ಕೋಟಿ ರೂ. ನಷ್ಟ ಉಂಟಾಗಿದೆ. ಆದರೆ, ಶೇ 40 ಕಮಿಷನ್ ಆಸೆಗಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಸೈಲೆಂಟ್ ಆಗಿದ್ದಾರೆ" ಎಂದು ಆರೋಪಿಸಿದರು.