ಮುಂಬೈ, ಆ 13 (DaijiworldNews/MS): ನಗ್ನ ಫೋಟೊಶೂಟ್ ಪ್ರಶ್ನಿಸಿ ದಾಖಲಿಸಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಆಗಸ್ಟ್ 22ರಂದು ಪೊಲೀಸರ ಮುಂದೆ ಹಾಜರಾಗುವಂತೆ ಬಾಲಿವುಡ್ ನಟ ರಣವೀರ್ ಸಿಂಗ್ಗೆ ಸಮನ್ಸ್ ನೀಡಲಾಗಿದೆ.
ರಣವೀರ್ ಸಿಂಗ್ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಬೆತ್ತಲೆ ಪೋಟೋ ಹಂಚಿಕೊಂಡಿದ್ದರು. ಈ ಪೋಟೊ ವೈರಲ್ ಆದ ಬೆನ್ನಲ್ಲೇ ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.
'ಮಹಿಳೆಯರ ಭಾವನೆಗಳನ್ನು ನೋಯಿಸಿದ್ದಾರೆ' ಎಂದು ರಣವೀರ್ ವಿರುದ್ಧ ಪೂರ್ವ ಮುಂಬೈ ಉಪನಗರದಲ್ಲಿರುವ ಸರ್ಕಾರೇತರ ಸಂಸ್ಥೆ(ಎನ್ಜಿಒ) ಪದಾಧಿಕಾರಿಯೊಬ್ಬರು ಚೆಂಬೂರ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.. ನಟ ತನ್ನ ಫೋಟೋಗಳ ಮೂಲಕ ಮಹಿಳೆಯರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ. ನಮ್ರತೆಗೆ ಅವಮಾನ ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದರು. ಅಲ್ಲದೆ ನಟನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರುದಾರರು ಒತ್ತಾಯಿಸಿದ್ದರು