ಕೊರ್ಬಾ, ಆ 13 (DaijiworldNews/HR): ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಅಂಗವಾಗಿ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ಪೌರ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಛತ್ತೀಸ್ಗಢದ ಕೊರಿಯಾ ಜಿಲ್ಲೆಯಲ್ಲಿ ಇಂದು ನಡೆದಿದೆ.
ಮೃತ ಕಾರ್ಮಿಕನನ್ನು ಸುಮನ್ ತಿಗ್ಗಾ ಎಂದು ಗುರುತಿಸಲಾಗಿದೆ.
ಕಾರ್ಮಿಕನೊಂದಿಗೆ ರಾಷ್ಟ್ರಧ್ವಜವನ್ನು ಕಟ್ಟುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಮಣೇಂದ್ರಗಢ ಉಪವಿಭಾಗೀಯ ಪೊಲೀಸ್ ಅಧಿಕಾರಿ(ಎಸ್ಡಿಒಪಿ) ರಾಕೇಶ್ ಕುರ್ರೆ ಅವರು ಹೇಳಿದ್ದಾರೆ.
ಇನ್ನು ಈ ಘಟನೆಯಲ್ಲಿ ಸುಮನ್ ತಿಗ್ಗಾ ಸಹೋದ್ಯೋಗಿ ರಾಮಕೃಪಾಲ್ ಸಿಂಗ್ (35) ಸಹ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.